ಆ್ಯಸಿಡ್ ದಾಳಿಕೋರರಿಗೆ ಗಲ್ಲು ಶಿಕ್ಷೆಯಾಗಬೇಕು- ಗಾಯಾಳು ಬಾಲಕಿ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಫೆಬ್ರವರಿ,18,2023(www.justkannada.in): ಅಪ್ರಾಪ್ತ ಬಾಲಕಿ  ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಸಿಡ್ ದಾಳಿಕೋರರಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಪ್ರೀತಿ ನಿರಾಕರಿಸಿದ್ದಕ್ಕೆ ನಿನ್ನೆ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿದ್ದ. ರಾಮನಗರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಸಂತ್ರಸ್ತ ಬಾಲಕಿಯ ಆರೋಗ್ಯ ವಿಚಾರಿಸಿದರು. ಪ್ರಮೀಳಾ ನಾಯ್ಡು ಮತ್ತು ಎಂಎಲ್ ಸಿ ಭಾರತ ಶೆಟ್ಟಿ ಸಾಥ್ ನೀಡಿದರು.

ಬಳಿಕ ಮಾತನಾಡಿದ ಶೋ‍ಭಾ ಕರಂಧ್ಲಾಜೆ, ಹೆಣ್ಣುಮಕ್ಕಳ ಮೇಳೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಮೈನರ್ ರೇಪ್ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುತ್ತದೆ.  ಅದೇ ರೀತಿ ಆ್ಯಸಿಡ್ ದಾಳಿಕೋರರಿಗೂ ಗಲ್ಲು ಶಿಕ್ಷೆಯಾಗಬೇಕು. ಸಂತ್ರಸ್ತೆ ಎಲ್ಲಿ ಓದಲು ಇಚ್ಚೆ ಇದೆಯೋ ಅಲ್ಲಿ ಓದಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

Key words: Acid-attack-girl- Union Minister- Shobha Karandlaje – health