Saturday, August 8, 2026

BDA Apartments

Home Front Page ಭ್ರಷ್ಟಾಚಾರದ ವಿರುದ್ಧ ಏನು ಕ್ರಮ ಕೈಕೊಂಡಿರಿ..? ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ ವಾಗ್ದಾಳಿ.

ಭ್ರಷ್ಟಾಚಾರದ ವಿರುದ್ಧ ಏನು ಕ್ರಮ ಕೈಕೊಂಡಿರಿ..? ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ ವಾಗ್ದಾಳಿ.

ಬೆಳಗಾವಿ,ಮೇ,6,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ,   ಶಾಸಕರನ್ನು ಖರೀದಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಕಳ್ಳತನದ ಸರ್ಕಾರ ಕಳ್ಳತನವನ್ನೇ ಮಾಡೋದು.  ಇಡೀ ದೇಶದಲ್ಲೇ ಅತೀ ಭ್ರಷ್ಟ ಸರ್ಕಾರ ಇದ್ದರೆ ಬಿಜೆಪಿ ಸರ್ಕಾರ ಎಂದು ಕುಟುಕಿದರು.

40% ಕಮಿಷನ್ ಬಗ್ಗೆ ಗುತ್ತಿಗೆದಾರರು ಮೋದಿಗೆ ಪತ್ರ ಬರೆದಿದ್ದರು. ಪ್ರಧಾನಿಯವರೇ ಭ್ರಷ್ಟಾಚಾರ ವಿರುದ್ಧ ಏನು ಕ್ರ‌ಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

Key words: action – against –corruption-Rahul Gandhi -PM Modi.