ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿರುವ ಆರ್ ಎಸ್ ಎಸ್ ಮೇಲೂ ಕ್ರಮ ತೆಗೆದುಕೊಳ್ಳಲಿ- ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಸೆಪ್ಟಂಬರ್,28,2022(www.justkannada.in): ಪಿಎಫ್ ಐ ಸಂಘಟನೆ ನಿಷೇಧ ಕುರಿತು ಪ್ರತಿಕ್ರಿಯಿಸಿರುವ  ವಿಪಕ್ಷ ನಾಯಕ ಸಿದ್ಧರಾಮಯ್ಯ, ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿರುವ ಆರ್ ಎಸ್ ಎಸ್ ಮೇಲೂ ಕ್ರಮ ತೆಗೆದುಕೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಅದೇ ರೀತಿ ಆರ್ ​ಎಸ್​ ಎಸ್​ ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಾಜಕ್ಕೆ ಕಂಟಕ ಆಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಿ  ಅಂಥವರ ವಿರುದ್ಧ ಕ್ರಮ ಕೈಗೊಂಡರೇ ನಮ್ಮ ಅಭ್ಯಂತರವಿಲ್ಲ ಸಾಮರಸ್ಯ ಹಾಳುಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಿ.  ಹಿಂದೆಯೂ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಎಂದರು.

‘ನಾವು ನುಡಿದಂತೆ ನಡೆದಿದ್ದೇವೆ’ ಎಂಬ ಬಿಜೆಪಿ ಟ್ವೀಟ್​ ಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ,  ಇಷ್ಟು ದಿನ ಯಾಕೆ ಬ್ಯಾನ್ ಮಾಡಿರಲಿಲ್ಲ? ಇಷ್ಟು ದಿನ ಏನ್ ಮಾಡುತ್ತಿದ್ದಿರಿ ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.

Key words: Action -against –RSS-Former CM -Siddaramaiah.