ರಾಜ್ಯದಲ್ಲಿ ಕೋವಿಡ್ ಸೋಂಕು ತಡೆಗೆ ಹೆಚ್ಚಿನ ಕ್ರಮ ಅಗತ್ಯ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜನವರಿ,10,2022(www.justkannada.in): ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು,  ಕೋವಿಡ್ ಪಾಸಿಟಿವಿಟಿ ದರದಲ್ಲಿ  ಕರ್ನಾಟಕ 3ನೇ ಸ್ಥಾನದಲ್ಲಿದೆ. ಹೀಗಾಗಿ ಸೋಂಕು ತಡೆಗೆ ಹೆಚ್ಚಿನ ಕ್ರಮದ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ. 6.33 ರಷ್ಟಿದೆ ಬೆಂಗಳೂರಿನಲ್ಲಿ ಶೇ10ರಷ್ಟಿದೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 9 ಸಾವಿರ ಕೇಸ್ ದಾಖಲಾಗಿದೆ.   ಹೀಗಾಗಿ ಮುಂಜಾಗ್ರತಾ ಕ್ರಮ ಅಗತ್ಯವಿದೆ.

ಸೋಂಕು ತಡೆಗೆ ಹೆಚ್ಚಿನ ಕ್ರಮ ಅಗತ್ಯವಿದೆ. ಸೋಂಕು ಪ್ರಮಾಣ ಆದರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: action – Kovid – state-CM-Basavaraja Bommai,