ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಶಶಿಕಲಾ ಜೊಲ್ಲೆ.

ಬೆಂಗಳೂರು,ಸೆಪ್ಟಂಬರ್,16,2021(www.justkannada.in):  ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್‍ ಸಚಿವರಾದ ಶಶಿಕಲಾ ಜೊಲ್ಲೆ ಅವರು ಹೇಳಿದ್ದಾರೆ.

ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅಚ೯ಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು  ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವೆ ಶಶಿಕಲಾ ಜೊಲ್ಲೆ, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭತಿ೯ಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭತಿ೯ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅಚ೯ಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರಿಗೆ  ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರು ಆದಷ್ಟು ಬೇಗ ನಿಮ್ಮ ಸಮಸ್ಯೆ ಪರಿಹರಿಸಿ ಕೊಡುವುದಾಗಿ ತಿಳಿಸಿದರು.

Key words: Action – fill- vacancies – temples -under -Muzarayi department- Minister-Shashikala Jolle

ENGLISH SUMMARY…

Measures to fill vacant posts in temples that come under Muzrai Department: Minister Shashikala Jolle
Bengaluru, September 16, 2021 (www.justkannada.in): Muzrai, Wakf, and Haj Minister Shashikala Jolle today informed that measures will be taken to fill the vacant posts soon in Muzrai temples like priests, assistant priests, etc.
Members of Karnataka State Hindu Temples Archaka, Aagamika, Upadeevantara Federation, Chamarajpet, Bengaluru met Muzrai Minister Shashikala Jolle at the office of Higher Education and IT, BT Minister Dr. Ashwathnarayana, in Vikasa Soudha today and submitted a memorandum.
The minister summoned the Muzrai Department officers to the spot and received the details of vacant posts in Hindu temples. She also instructed the officials to rectify the technical glitches that exists in filling up the vacant posts as soon as possible and assured the members of solving the problem soon.
Keywords: Muzrai Minister/ Shashikala Jolle/ Hindu temples/ vacant posts/ fill up