ಕೊರೋನಾ ರೋಗ ಲಕ್ಷಣ ಇಲ್ಲದವರನ್ನ ಆಸ್ಪತ್ರೆಗೆ ದಾಖಲಿಸಿಕೊಂಡರೆ ಕ್ರಮ- ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ…

ಬೆಂಗಳೂರು,ಏಪ್ರಿಲ್,24,2021(www.justkannada.in):  ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಈ ನಡುವೆ ರೋಗ ಲಕ್ಷಣ ಇಲ್ಲದವರನ್ನ ಆಸ್ಪತ್ರೆಗೆ ದಾಖಲಿಸಿಕೊಳ್ಳುವಂತಿಲ್ಲ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

ಈ ಕುರಿತು ಇಂದು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೊರೋನಾ ರೋಗ ಲಕ್ಷಣ ಇಲ್ಲದವರನ್ನ ಆಸ್ಪತ್ರೆಗಳು ದಾಖಲಿಸಿಕೊಳ್ಳುವಂತಿಲ್ಲ. ಒಂದು ವೇಳೆ ಸರ್ಕಾರದಿಂದ ಹಣ ಬರುತ್ತದೆ ಎಂದು ದಾಖಲಿಸಿಕೊಂಡರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಕೊರೋನಾ ಸೋಂಕಿತರಿಗೆ ಶೇ.80ರಷ್ಟು ಹಾಸಿಗೆ ಮೀಸಲು ಸಂಬಂಧ ಇಂದೇ ಆದೇಶ ಹೊರಡಿಸುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.Action - hospitalized -someone –with- coronal- syndrome-Minister- Dr K Sudhakar -warns.

ಸೋಮವಾರದ ನಂತರವೂ  ಟಫ್ ರೂಲ್ಸ್ ಜಾರಿ ಕುರಿತು ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಸಚಿವ ಸಂಪುಟ ಸಭೆಯಲ್ಲಿ ಆಗುವ ತೀರ್ಮಾನವೇ ಅಂತಿಮ. ಸಂಪುಟ ಸಭೆಯಲ್ಲಿ ಸಚಿವರು ಸಲಹೆ ನೀಡುತ್ತಾರೆ. ಆರೋಗ್ಯ ಇಲಾಖೆಯಿಂದಲೂ ಸಲಹೆ ನೀಡಲಾಗುತ್ತದೆ. ಬಳಿಕ ಸಿಎಂ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

Key words: Action – hospitalized -someone –with- coronal- syndrome-Minister- Dr K Sudhakar -warns.