Tuesday, September 29, 2026

BDA Apartments

ಎಸ್’ಡಿಪಿಐ, ಪಿಎಫ್ಐ ಸಂಘಟನೆ ನಿಷೇಧಕ್ಕೆ ಕ್ರಮ: ಪ್ರಲ್ಹಾದ್ ಜೋಶಿ BDA JK_Adv BDA Adv
Home Front Page ಎಸ್’ಡಿಪಿಐ, ಪಿಎಫ್ಐ ಸಂಘಟನೆ ನಿಷೇಧಕ್ಕೆ ಕ್ರಮ: ಪ್ರಲ್ಹಾದ್ ಜೋಶಿ

ಎಸ್’ಡಿಪಿಐ, ಪಿಎಫ್ಐ ಸಂಘಟನೆ ನಿಷೇಧಕ್ಕೆ ಕ್ರಮ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ, ಮೇ 29, 2022 (www.justkannada.in): ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರು ಪ್ರಚೋದನಾತ್ಮಕ ಘೋಷಣೆ ಕೂಗುತ್ತ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ಸರಿಯಾದ ಮೂಲ ಸ್ಥಾನವಿಲ್ಲ, ಆದರೆ ಆರ್‌ಎಸ್‌ಎಸ್‌ ಮೂಲ ಕೆದುಕುತ್ತಾರೆ ಎಂದು ಟೀಕಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗೆ ಸದಾ ಕುಮ್ಮಕ್ಕು ನೀಡುತ್ತಾ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.