ಒಮಿಕ್ರಾನ್ ವೈರಸ್ ತಡೆಗೆ ಕ್ರಮ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು, ನವೆಂಬರ್ 30, 2021 (www.justkannada.in): ಒಮಿಕ್ರಾನ್ ವೈರಸ್ ತಡೆಗೆ ಏನೆಲ್ಲ ಕ್ರಮ ವಹಿಸಬೇಕು ಎಂಬ ಕುರಿತು ತೀರ್ಮಾನ ಕೈಗೊಳ್ಳಲು ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಆರೋಗ್ಯ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಡಿಹೆಚ್‌ಓ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ಕೋವಿಡ್ ಉಸ್ತುವಾರಿ ಸಚಿವರು ಕೂಡ ಭಾಗವಹಿಸಲಿದ್ದಾರೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲೆಗಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.