ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಅರ್ಜಿ

ಬೆಂಗಳೂರು,ಆಗಸ್ಟ್,16,2025 (www.justkannada.in):  ಸ್ಯಾಂಡಲ್ ವುಡ್ ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು  ಉಂಟಾಗಿದ್ದು ,ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 2014 ರಲ್ಲಿ ಸ್ವಪ್ನಾ ಜೊತೆ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದ ಅಜಯ್ ರಾವ್ ಜೀವನ ಚೆನ್ನಾಗಿತ್ತು. ಆದರೆ ಇದೀಗ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಚೇದನ ನೀಡುವಂತೆ ಅಜಯ್ ಹಾಗೂ ಸ್ವಪ್ನಾ ರಾವ್ ಕೋರ್ಟ್ ಮೊರೆ ಹೋಗಿದ್ದಾರೆ.

ಪತಿ ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು. ಮದುವೆ ಆಗಿ 10 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ಪತಿ ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ ಎನ್ನಲಾಗಿದೆ.

Key words: Actor, Ajay Rao, Wife, Divorce