Thursday, September 10, 2026

BDA Apartments

Home Cinema ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ನಿಧನ

ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ನಿಧನ

ಬೆಂಗಳೂರು, ಜುಲೈ 23, 2022 (www.justkannada.in): ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ (84) ಶನಿವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ಲಕ್ಷ್ಮೀದೇವಿ ಅವರು ಖ್ಯಾತ ನಟ ಶಕ್ತಿ ಪ್ರಸಾದ್ ಅವರ ಪತ್ನಿ. ಲಕ್ಷ್ಮಿದೇವಿ ಮತ್ತು ಶಕ್ತಿ ಪ್ರಸಾದ್ ದಂಪತಿಗೆ ಮೂವರು ಮಕ್ಕಳು. ಒಬ್ಬರು ಪುತ್ರಿ, ಇಬ್ಬರು ಪುತ್ರರು ಇದ್ದರು.

ಲಕ್ಷ್ಮೀ ಅವರ ಅಂತ್ಯಕ್ರಿಯೆಯ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.