ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೇಮಕ…

ಬೆಂಗಳೂರು, ಫೆಬ್ರವರಿ,15,2021(www.justikannada.in):  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.jk

ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.actor -Challenging star- Darshan -appoints- - ambassador -agriculture department

ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ  ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಸಹ ಮೆಚ್ಚಿದ್ದರು. ಸ್ವತಃ ಕೃಷಿಕರೂ ಆಗಿರುವ ಬಿ.ಸಿ.ಪಾಟೀಲ್ ಅವರೊಂದಿಗೆ ನಟ ದರ್ಶನ್ ಚರ್ಚಿಸಿ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಿದೆ.

Key words: actor -Challenging star- Darshan -appoints- – ambassador -agriculture department