ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್.

ಮೈಸೂರು,ಜೂನ್,11,2024 (www.justkannada.in): ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನ ಬೆಂಗಳೂರು ಪೊಲೀಸರು  ಬಂಧಿಸಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 10 ಜನರನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್  ಮಾಡಿದ್ದನು. ಅಶ್ಲೀಲ ಮೆಸೇಜ್ ಫೋಟೊ ಹಾಕಿದ್ದನು ಎನ್ನಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದ ತಂಡದಲ್ಲಿ ನಟ ದರ್ಶನ್ ಇದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ರೇಣುಕಾಸ್ವಾಮಿಯನ್ನ ಹತ್ಯೆಗೈದು ಕಾಮಾಕ್ಷಿಪಾಳ್ಯದ ಮೋರಿಗೆ ಶವ ಎಸೆದಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.

Key words: Actor, Challenging Star, Darshan, arrest