ಬೆಂಗಳೂರು,ಸೆಪ್ಟಂಬರ್,17,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಿಷ್ಠ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಬೆಂಗಳೂರಿನ 57ನೇ ಸಿಸಿ ಎಚ್ ನ್ಯಾಯಾಲಯ ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಿದೆ.
ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಅಗತ್ಯ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಹಾಸಿಗೆ, ದಿಂಬು ನೀಡಲು ನಿರ್ದೇಶನ ನೀಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಇದೀಗ ಇಂದು ಬೆಂಗಳೂರಿನ ಸಿಸಿಎಚ್ 57ನೇ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲಾಯಿತು. ಈ ವೇಳೆ CCH 57ನೆ ಕೋರ್ಟ್ ಜಡ್ಜ್ ವಿಚಾರಣೆಯನ್ನು ಸಂಜೆ 4 ಗಂಟೆಗೆ ಮುಂದೂಡಿದರು. ನಂತರ ಇದೀಗ ವಿಚಾರಣೆಯನ್ನ ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಿದ್ದು ಅಂದು ಆದೇಶ ಪ್ರಕಟಿಸಲಿದ್ದಾರೆ.
Key words: Court, adjourns, hearing ,actor Darshan, petition