ಬೆಂಗಳೂರು,ಅಕ್ಟೋಬರ್,10,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಜೈಲಿನಲ್ಲಿ ಕನಿಷ್ಠ ಸವಲತ್ತುಗಳನ್ನು ಕೂಡ ನೀಡಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಭಾಗಶಃ ಅಂಗೀಕಾರ ಮಾಡಿದೆ.
ನಟ ದರ್ಶನ್ ಅವರಿಗೆ ಜೈಲಿನಲ್ಲಿ ಕನಿಷ್ಠ ಸವಲತ್ತುಗಳನ್ನು ಕೂಡ ನೀಡಿಲ್ಲ ಎಂದು ಆರೋಪಿಸಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜೈಲಿನಲ್ಲಿ ಖುದ್ದು ಪರಿಶೀಲನೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆ ಅರ್ಜಿಯನ್ನು ಇದೀಗ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಅಂಗೀಕರಿಸಿದ್ದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು ಎಂದು ಆದೇಶಿಸಿದೆ.
‘ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಜೈಲು ಕೈಪಿಡಿಯಂತೆ ಸವಲತ್ತು ನೀಡಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು. ಅಕ್ಟೋಬರ್ 18ರೊಳಗೆ ಭೇಟಿ ನೀಡಿ ವರದಿ ನೀಡಬೇಕು’ ಎಂದು ಬೆಂಗಳೂರು ನಗರ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚನೆ ನೀಡಿದೆ.
ನಟ ದರ್ಶನ್ ಜೈಲಿನಲ್ಲಿ ತನಗೆ ಹೆಚ್ಚುವರಿ ಹಾಸಿಗೆ, ದಿಂಬು ಹಾಗೂ ಇತರೆ ಮೂಲಸೌಲಭ್ಯ ಕಲ್ಪಿಸಲು ನ್ಯಾಯಾಧೀಶರೇ ಒಮ್ಮೆ ಪರಿಶೀಲಿಸುವಂತೆ ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು.
Key words: Actor, Darshan, accused, jail, court