Tuesday, October 27, 2026

Dasara Wishes

Happy Dasara
Home Cinema ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಸಾಂದರ್ಭಿಕ ಚಿತ್ರ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ puliyogare,ayyangar WhatsApp 11 16 at 12.03.42 PM

ಬೆಂಗಳೂರು,ನವೆಂಬರ್,21,2024 (www.justkannada.in): ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ದರ್ಶನ್  ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶಿಸಿದೆ.

ಪ್ರಕರಣ ಸಂಬಂಧ ಬೆನ್ನುನೋವು ಚಿಕಿತ್ಸೆಗಾಗಿ ನಟ ದರ್ಶನ್ 6 ವಾರಗಳ ಕಾಲ ಈಗಾಗಲೇ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ನಡುವೆ ಇಂದು ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದ್ದು, ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ  ಮುಂದೂಡಲಾಗಿದೆ.

ಇಂದಿನ ವಿಚಾರಣೆ ವೇಳೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಅವರು ದರ್ಶನ್​ಗೆ ಮಧ್ಯಂತರ ಜಾಮೀನಿನ ನೀಡಿದ ವೇಳೆ ಸೂಚಿಸಲಾಗಿದ್ದ ಕೆಲ ನಿಯಮಗಳನ್ನು ಪಾಲಿಸಿಲ್ಲವೆಂದು ವಾದಿಸಿದರು. ದರ್ಶನ್ ಪರ ವಕೀಲರು ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ  ಸಲ್ಲಿಕೆ ಮಾಡಿದರು. ಹೈಕೋರ್ಟ್ ಗೆ  ಹೆಚ್ಚುವರಿ ಆರೋಪಪಟ್ಟಿ ವಿಚಾರಣಾ ಕೋರ್ಟ್​ಗೆ ಸಲ್ಲಿಸಲಾಯಿತು.

ಆರೋಪಿ ದರ್ಶನ್ ಗೆ ವೈದ್ಯಕೀಯ ಕಾರಣಗಳಿಗಾಗಿ ಆರು ವಾರಗಳ ಮಧ್ಯಂತರ ಜಾಮೀನನ್ನು ಹೈಕೋರ್ಟ್ ಈಗಾಗಲೇ ನೀಡಿದೆ.

Key words: Actor, Darshan, bail application, hearing