Saturday, September 12, 2026

BDA Apartments

ನಟ ದರ್ಶನ್ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು BDA JK_Adv BDA Adv
Home Cinema ನಟ ದರ್ಶನ್ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು    

ನಟ ದರ್ಶನ್ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲು    

ಬೆಂಗಳೂರು, ನವೆಂಬರ್,1,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿರುವ  ನಟ ದರ್ಶನ್ ಇದೀಗ ಬೆನ್ನುನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

 ಬೆಂಗಳೂರಿನ ಕೆಂಗೇರಿಯ ವಿಷ್ಣುವರ್ದನ್ ರಸ್ತೆ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಆಸ್ಪತ್ರೆಗೆ ನಟ ದರ್ಶನ್ ಆಗಮಿಸಿರುವ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ. ಆಸ್ಪತ್ರೆಯ ಬಳಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದೇ ಒಂದು ಬೆನ್ನುನೋವಿನ ಸಮಸ್ಯೆ ಕಾರಣವನ್ನು ನೀಡಿ ಹೈಕೋರ್ಟ್ ನಲ್ಲಿ ನಡೆದ ದರ್ಶನ್ ಹಿರಿಯ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು ಒಂದು ವೇಳೆ ಕೂಡಲೇ ಚಿಕಿತ್ಸೆ ಪಡೆದುಕೊಳ್ಳದೆ ಹೋದಲ್ಲಿ ಅವರಿಗೆ ಪಾರ್ಶ್ವ ವಾಯು ಆಗುವ ಸಾಧ್ಯತೆ ಇದೆ ಎಂದು ಮನವರಿಕೆ ಮಾಡಿದ್ದರು ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ಹೈಕೋರ್ಟ್ ನಟ ದರ್ಶನ್ ಅವರಿಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ನಡುವೆ ಇದೀಗ  ಬೆನ್ನು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ಅವರು ದಾಖಲಾಗಿದ್ದಾರೆ.

Key words: Actor, Darshan, admitted, BGS hospital