ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ..!

ಮೈಸೂರು,ಜೂನ್,18,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಗೆ  ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಮೈಸೂರು ಜಿಲ್ಲೆ ಟಿ‌.ನರಸೀಪುರದಲ್ಲಿರುವ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೂ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.

ನಟ ದರ್ಶನ್ A3, ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಎಫ್ ಐಆರ್ ದಾಖಲಾಗಿ ಐದು ನೋಟಿಸ್ ನೋಟಿಸ್ ಕೊಟ್ಟರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿರಲಿಲ್ಲ.  ಈ ಮಧ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು.

ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರ‌. ಇನ್ನು ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ವಿಚಾರಣೆಗೆ ಅವಕಾಶ‌‌ ನೀಡಲಾಗಿತ್ತು. ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಅರಣ್ಯ ಇಲಾಖೆ ದರ್ಶನ್ ಅವರನ್ನ ಬಂಧಿಸಿಲ್ಲ. ಇದೀಗ ಪ್ರಕರಣ ಚುರುಕು ಗೊಳಿಸಿರುವ ಅರಣ್ಯ ಇಲಾಖೆ ಚಾರ್ಜ್ ಶೀಟ್ ಸಲ್ಲಿಕೆಗೆ ತೀರ್ಮಾನಿಸಿದೆ.

Key words: Actor-Darshan- arrest- murder case- problem