ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣ: ಸಂದೇಶ್ ಪ್ರಿನ್ಸ್ ಹೋಟೆಲ್ ಗೆ ಪೊಲೀಸರ ಭೇಟಿ, ಪರಿಶೀಲನೆ.

ಮೈಸೂರು,ಜುಲೈ,16,2021(www.justkannada.in):  ಸಪ್ಲೇಯರ್ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.jk

ನಟ ದರ್ಶನ್ ಹಾಗೂ ಸ್ನೇಹಿತರು ಸಂದೇಶ್ ಪ್ರಿನ್ಸ್  ಹೋಟೆಲ್ ನಲ್ಲಿ ಸಪ್ಲೇಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ಸಂದೇಶ್ ಪ್ರಿನ್ಸ್ ಹೋಟೆಲ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿಗಳಿಂ ಮಾಹಿತಿ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

Key words: Actor -Darshan – assault –supplier-case- Police -visit – Sandesh Prince Hotel