Thursday, October 8, 2026

BDA Apartments

Home Cinema ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಸೆಪ್ಟಂಬರ್,21,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣದಲ್ಲಿ ಬಂಧಿತರಾಗಿ 100 ದಿನ ಕಳೆದ ಬಳಿಕ ನಟ ದರ್ಶನ್ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜೈ ಶಂಕರ್ ಅವರು ಆಕ್ಷೇಪಣೆ ಸಲ್ಲಿಸಲು ಎಸ್ ಪಿಪಿಗೆ ಸೂಚನೆ ನೀಡಿ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿದರು.

ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್​​​​​​ಗೆ, ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ್ದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ VTU TOP BANNER 04

Key words: Actor, Darshan,  bail application, hearing, adjourned