Wednesday, October 7, 2026

BDA Apartments

immense respect BDA JK_Adv BDA Adv
Home Cinema ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು,ಅಕ್ಟೋಬರ್,28,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನ ಈ ಹಿಂದೆ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು,  ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ ನ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ನಡೆದಿದೆ.

ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ ಪಿಪಿ ಪ್ರಸನ್ನ ಕುಮಾರ್‌ ಕೋರ್ಟ್‌ ಬಳಿ ಕಾಲಾವಕಾಶ ಕೇಳಿದ್ದು ವಿಚಾರಣೆಯನ್ನ ಹೈಕೋರ್ಟ್ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದ್ದಾರೆ.

ದರ್ಶನ್ ಅವರಿಗೆ ಬೆನ್ನುನೋವು ಹಿನ್ನೆಲೆಯಲ್ಲಿ ಸಿಟಿ ಸ್ಕ್ಯಾನ್ ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ. ತಕ್ಷಣ ಸರ್ಜರಿ ಅಗತ್ಯ ಎಂದಿದ್ದಾರೆ.  ಚಿಕಿತ್ಸೆ ಪಡೆಯದಿದ್ದರೇ ಪ್ಯಾರಲಿಸಿಸ್ ಆಗಬಹುದು ಎಂದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.

Key words: Actor Darshan, bail application, hearing, high court, adjourned