Friday, September 18, 2026

BDA Apartments

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ BDA JK_Adv BDA Adv
Home Front Page ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು, ಸೆಪ್ಟೆಂಬರ್‌ 23,2024 (www.justkannada.in): ರೇಣುಕಾಸ್ವಾಮಿ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್​ ನಲ್ಲಿ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.  ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಗೆ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 23ಕ್ಕೆ ಮುಂದೂಡಿತ್ತು.

ಇಂದು ದರ್ಶನ್ ಅರ್ಜಿ ವಿಚಾರಣೆಗೆ ಬರಲಿದ್ದು, ಆಕ್ಷೇಪಣೆ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ನಟ ದರ್ಶನ್ ಸೇರಿ ಎಲ್ಲಾ17 ಆರೋಪಿಗಳ ವಿರುದ್ದ  ಪೊಲೀಸರು 3991 ಪುಟಗಳ  ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಜೈಲಾ ಅಥವಾ ಬೇಲಾ ಕಾದು ನೋಡಬೇಕಿದೆ.ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ VTU TOP BANNER 04

Key words: Actor, Darshan, bail application, hearing, today