Saturday, September 19, 2026

BDA Apartments

ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್ BDA JK_Adv BDA Adv
Home Cinema ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್

ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು,ಅಕ್ಟೋಬರ್,29,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮಧ್ಯಂತರ ಜಾಮೀನು ಕುರಿತ ಆದೇಶವನ್ನ ನಾಳೆಗೆ ಹೈಕೋರ್ಟ್ ಕಾಯ್ದಿರಿಸಿದೆ.

ಪ್ರಕರಣ ಸಂಬಂಧ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೆ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ವಾದ ಪ್ರತಿವಾದ ಆಲಿಸಿ  ಜಾಮೀನು ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

ನಟ ದರ್ಶನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, ನಟ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ವೈದ್ಯರು ಶಸ್ತ್ರ ಚಿಕಿತ್ಸೆಗೆ ಸೂಚಿಸಿದ್ದಾರೆ. ಶಸ್ತ್ರ ಚಿಕಿತ್ಸೆಯ ನಂತ್ರ ಕಾಲು ಸ್ವಾಧೀನವಾದರೂ ಆಗಬಹುದು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಅಲ್ಲದೆ ಅನಾರೋಗ್ಯದ ಸಂದರ್ಭದಲ್ಲಿ ಹೈಕೋರ್ಟ್ ಕೂಡ ಜಾಮೀನು ಮಂಜೂರು ಮಾಡಿದೆ ಎಂಬುದಾಗಿ ವಿವಿಧ ಪ್ರಕರಣಗಳನ್ನು ಉಲ್ಲೇಖಿಸಿದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ಆದೇಶವನ್ನ ನಾಳೆಗೆ ಕಾಯ್ದಿರಿಸಿದ್ದು ನಾಳೆ ದರ್ಶನ್  ಮಧ್ಯಂತರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

Key words: Actor, Darshan, bail, order, reserved, High Court