ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ: ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ಏನು..?

ಉಡುಪಿ,ಏಪ್ರಿಲ್,19,2024 (www.justkannada.in):   ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸುಮಲತಾ ಅಂಬರೀಶ್, ಕಾಂಗ್ರೆಸ್ ಅಥವಾ ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಬೇಡ ಎಂದು ನಾಣು ಹೇಳಲ್ಲ ನಾನು ಸ್ಪರ್ಧೆ ಮಾಡಿದ್ದರೆ ದರ್ಶನ್ ನನ್ನ ಪರ ಪ್ರಚಾರಕ್ಕೆ ಬರುತ್ತಿದ್ದರು  ಎಂದರು.

ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ  ಹೆಚ್.ಡಿ ಕುಮಾರಸ್ವಾಮಿ ಪರ ಪ್ರಚಾರದಲ್ಲಿ ಭಾಗವಹಿಸದ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಾನಾಗಿಯೇ ಎಲ್ಲಿಗೂ ಹೋಗಿಲ್ಲ. ಪಕ್ಷ ಹೇಳಿದರೇ ಹೆಚ್ ಡಿಕೆ ಪರ ಪ್ರಚಾರ ಮಾಡುತ್ತೇನೆ ಎಂದರು.

ಸುಮಲತಾ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ  ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಸಂಸದೆ. ಹೀಗಾಗಿ  ಕಾಂಗ್ರೆಸ್ ಶಾಸಕರೂ ಕೂಡ ಸಿಗುತ್ತಾರೆ. ಎಲ್ಲೋ ತೆಗೆದಿರುವ ಫೋಟೊ ಈಗ ಹಾಕಿದ್ದಾರೆ ಎಂದರು.

Key words: Actor, Darshan, campaign, Sumalatha Ambarish