Friday, October 16, 2026

Dasara Wishes

Happy Dasara
Home Front Page ನಟ ದರ್ಶನ್ ಪ್ರಚಾರ ಮಾಡಿದ್ರಲ್ಲಿ ತಪ್ಪೇನು ಇಲ್ಲ- ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿಕೆ.

ನಟ ದರ್ಶನ್ ಪ್ರಚಾರ ಮಾಡಿದ್ರಲ್ಲಿ ತಪ್ಪೇನು ಇಲ್ಲ- ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿಕೆ.

ಶಿವಮೊಗ್ಗ,ಏಪ್ರಿಲ್, 18,2024 (www.justkannada.in): ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ, ನಟ ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು ಎಂದು ಹೇಳಿದ್ದಾರೆ.

ಇಂದು  ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ  ಹೆಚ್.ಡಿ ಕುಮಾರಸ್ವಾಮಿ, , ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂಥದ್ದು ಏನೂ ಇಲ್ಲ ಎಂದರು.

ಜೆಡಿಎಸ್, ಬಿಜೆಪಿ ಒಗ್ಗಟ್ಟಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ಶಿವಮೊಗ್ಗ ಕ್ಷೇತ್ರದಲ್ಲಿ ಉತ್ತಮವಾಗಿ ಹೊಂದಾಣಿಕೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರು ಹೇಳಿದ್ದು 30- 35 ವರ್ಷದ ಕಥೆ. ಅದಕ್ಕೆ ದಾಖಲೆ ಇದೆ ಎಂದು ದೇವೇಗೌಡ್ರು ಹೇಳಿದ್ದಾರೆ ಎಂದರು.

Key words: actor, Darshan ,campaigning, HD Kumaraswamy