Saturday, September 26, 2026

BDA Apartments

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ BDA JK_Adv BDA Adv
Home Cinema ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಬೆಂಗಳೂರು,ಅಕ್ಟೋಬರ್,15,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣ ಸಂಬಂಧ ನಿನ್ನೆ ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜಾಮೀನು ನೀಡಲು ನಿರಾಕರಿಸಿತು. ಈ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಅವರು ತಮ್ಮ ಪರ ವಕೀಲ ಸುನೀಲ್ ಮೂಲಕ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ಎ1 ಪವಿತ್ರಾಗೌಡರ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ವಜಾಗೊಳಿಸಿದೆ. ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

Key words: Actor, Darshan, High Court, bail, application