ಬೆಂಗಳೂರು,ಮೇ,28,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಇದೀಗ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಡೆವಿಲ್ ಸಿನಿಮಾ ಶೂಟಿಂಗಾಗಿ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನಟ ದರ್ಶನ್ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದುಬೈ ಮತ್ತು ಯೂರೋಪ್ ಗೆ ತೆರಳಲು ಅವಕಾಶ ನೀಡುವಂತೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗದಂತೆ ಷರತ್ತು ವಿಧಿಸಿತ್ತು. ಬಳಿಕ ಹೊರ ರಾಜ್ಯಗಳಿಗೆ ಹೋಗಲು ಹೈಕೋರ್ಟ್ ಅನುಮತಿ ನೀಡಿತ್ತು. ಸಿನಿಮಾ ಚಿತ್ರೀಕರಣ ಕಾರಣ ನೀಡಿ ದರ್ಶನ್ ಷರತ್ತು ಸಡಿಲಿಸಿಕೊಂಡಿದ್ದರು.ಇದೀಗ ಡೆವಿಲ್ ಸಿನಿಮಾ ಚಿತ್ರೀಕರಣಕ್ಕಾಗಿ ಅನುಮತಿ ನೀಡುವಂತೆ ಮನವಿ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
Key words: Actor Darshan, petition, court, permission, travel, abroad