Sunday, August 9, 2026

BDA Apartments

Home Front Page ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ನಟ ದರ್ಶನ್ ರಕ್ಷಣೆ ಮಾಡುತಿದ್ದೀರಾ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ನಟ ದರ್ಶನ್ ರಕ್ಷಣೆ ಮಾಡುತಿದ್ದೀರಾ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ.

ಬೆಂಗಳೂರು, ಜೂನ್ 14,2024 (www.justkannada.in):  ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ವಿಚಾರಣೆ ನಡೆಯುತ್ತಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ವೇಳೆ ನಟ ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ರಕ್ಷಣೆ ಮಾಡಲು ಮುಂದಾಗಿದ್ದೀರಾ?  ಠಾಣೆಗೆ ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರೆ. ಜನರಿಗೊಂದು ಕಾನೂನು ದರ್ಶನ್ ಗೊಂದು ಕಾನೂನು ಮಾಡಿದ್ದಾರೆ. ನಿಜವಾದ ಆರೋಪಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ  ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲ. ದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ. ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಶೋಭಾ ಕರಂದ್ಲಾಜೆ ಹೇಳಿದರು.

Key words: actor Darshan, protect, Union Minister, Shobha Karandlaje