Tuesday, August 4, 2026

BDA Apartments

Home Front Page ಭದ್ರತಾ ದೃಷ್ಠಿಯಿಂದ  ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ಭದ್ರತಾ ದೃಷ್ಠಿಯಿಂದ  ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಗೃಹ ಸಚಿವ ಡಾ.ಜಿ.ಪರಮೇಶ್ವರ್

 ಬೆಂಗಳೂರು,ಆಗಸ್ಟ್,29,2024 (www.justkannada.in): ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು ಉಳಿದ ಆರೋಪಿಗಳನ್ನ ಮೈಸೂರು, ಶಿವಮೊಗ್ಗ, ಬೆಳಗಾವಿ ಹೀಗೆ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, 8 ರಿಂದ 10 ಜನರನ್ನ  ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಭದ್ರತಾ ದೃಷ್ಠಿಯಿಂದ ಶಿಫ್ಟ್ ಮಾಡಲಾಗಿದೆ.  ಯಾರನ್ನ ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನ ಪೊಲೀಸರೇ ನಿರ್ಧಾರ ಮಾಡಿದ್ದಾರೆ  ಎಂದರು.

ದರ್ಶನ್ ಸ್ಥಳಾಂತರ ಮಾಡಿರುವುದು ಅಧಿಕಾರಿಗಳ ತೀರ್ಮಾನವಾಗಿದೆ.  ಘಟನೆ ಬಳಿಕ ಪೊಲೀಸರೇ ತೀರ್ಮಾನ ಮಾಡಿದ್ದಾರೆ  ಎಂದು ಪರಮೇಶ್ವರ್ ತಿಳಿಸಿದರು.

Key words: actor Darshan, shifted, Bellary Jail, Home Minister, Dr. G. Parameshwar