ನವದೆಹಲಿ,ಅಕ್ಟೋಬರ್,8,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್ ಮಾಫಿಸಾಕ್ಷಿ ಪರಿಗಣಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಜೈಲಿನಲ್ಲಿರುವ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ನಲ್ಲೂ ಹಿನ್ನಡೆಯಾಗಿದೆ. ಆರೋಪಿ ಪ್ರದೋಷ್ ಮಾಫಿಸಾಕ್ಷಿಯಾಗಲು ಹೈಕೋರ್ಟ್ ಪರಿಗಣನೆ ಮಾಡಿತ್ತು. ಈ ಆದೇಶವನ್ನ ಪ್ರಶ್ನಿಸಿ ವಿಜಯಲಕ್ಷ್ಮಿ ಅವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದೀಗ ಸುಪ್ರೀಂಕೋರ್ಟ್ ಮೇಲ್ಮನವಿಯನ್ನ ವಜಾಗೊಳಿಸಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.







