ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು,ಜುಲೈ,9,2024 (www.justkannada.in): ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಇದೀಗ ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಊಟ, ಹಾಸಿಗೆ, ಪುಸ್ತಕಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Key words: Actor, Darshan, writ, petition, High Court