ಸುತ್ತೂರು ಸರಕಾರಿ ಶಾಲೆಗೆ ಪ್ರೊಜೆಕ್ಟರ್ ನೀಡಿದ ಡಾಲಿ ಧನಂಜಯ

ಬೆಂಗಳೂರು, ಏಪ್ರಿಲ್ 1, 2021 (www.justkannada.in): 

ಸುತ್ತೂರು ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲು ನಟ ಧನಂಜಯ ಪ್ರೊಜೆಕ್ಟರ್ ನೀಡಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೊಜೆಕ್ಟರ್ ಅನ್ನು ಅಭಿಮಾನಿಗಳ ನೆಚ್ಚಿನ ಡಾಲಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಸೂಕ್ತ ಅನುಕೂಲ ಮಾಡಿಕೊಡಬೇಕು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಒಳ್ಳೆಯ ಶಿಕ್ಷಣ ಸಿಗಲಿದೆ ಎಂದು ಧನಂಜಯ್ ಹೇಳಿದ್ದಾರೆ.

ಅಂದಹಾಗೆ ಡಾಲಿ ನಟಿಸಿರುವ ಯುವರತ್ನ ಸಿನಿಮಾ ಇಂದು ಬಿಡುಗಡೆಯಾಗಿದೆ.