ನಟ ದರ್ಶನ್ ಸೇರಿ ನಾಲ್ವರು ಮತ್ತೆ ಪೊಲೀಸ್ ಕಸ್ಟಡಿಗೆ: ಪವಿತ್ರಗೌಡ ಸೇರಿ ಉಳಿದವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು,ಜೂನ್,20,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಪೊಲೀಸ್ ಕಸ್ಟಡಿ  ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲಿಸರು 13 ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ  ಮುಂದೆ ಹಾಜರು ಪಡಿಸಿದ್ದರು.

ಈ ವೇಳೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ಕಸ್ಟಡಿಗೆ ಕೇಳಿದರು.

ಈ ಹಿನ್ನೆಲೆಯಲ್ಲಿ ನಟ ದರ್ಶನ್ , ಧನರಾಜ್, ವಿನಯ್, ಪ್ರದೋಶ್ ನಾಲ್ವರು ಆರೋಪಿಗಳನ್ನು ಎರಡು ದಿನಗಳ ಕಾಲ ಮತ್ತೆ  ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ  ಹೊರಡಿಸಿದೆ. ಇದೇ ವೇಳೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ ಎನ್ನಲಾಗಿದೆ.

Key words: Actor, Dharshan, police, custody