ವರನಟ ಡಾ. ರಾಜಕುಮಾರ್ ಅವರ ಜನ್ಮ ದಿನಾಚರಣೆ.

ಬೆಂಗಳೂರು ಗ್ರಾಮಾಂತರ, ಏಪ್ರಿಲ್, 24 (www.justkannada.in):  ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಾಗೂ ವರನಟ ಡಾ. ರಾಜ್ ಕುಮಾರ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಛೇರಿಯಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಾರ್ತಾ ಇಲಾಖೆಯ ಉಪನಿರ್ದೇಶಕರಾದ ಎಸ್. ಶಂಕರಪ್ಪ ಅವರು ಡಾ. ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.   ಕಾರ್ಯಕ್ರಮದಲ್ಲಿ ವಾರ್ತಾ ಸಹಾಯಕರಾದ ಹೇಮಾವತಿ ಜೆ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Key words: actor, Dr. Rajkumar, Birthday