ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ಬೆಂಗಳೂರು,ಸೆಪ್ಟಂಬರ್,11,2025 (www.justkannada.in):  ನಟ ದಿವಂಗತ ಡಾ. ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೊತೆಗೆ ನಟಿ. ದಿ.ಬಿ.ಸರೋಜಾದೇವಿ ಅವರಿಗೂ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಸಚಿವಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಈ ಘೋಷಣೆ ಮಾಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಶಿಫಾರಸ್ಸು ಮಾಡಲು ತೀರ್ಮಾನ ಮಾಡಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೆ  ಹಿರಿಯ ನಟಿ ಭಾರತಿ ವಿಷ್ಣುವರ್ದನ್ ಮತ್ತು ನಟ ಅನಿರುದ್ದ್ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ವಿಷ್ಣುವರ್ಧನ್ ಅವರ ಸಮಾಧಿಗೆ ಅಭಿಮಾನ್ ಸ್ಟುಡಿಯೋದಲ್ಲಿ ಜಾಗ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೆ ಕರ್ನಾಟಕ ರತ್ನ ಪ್ರಶಸ್ತಿಗೂ ಮನವಿ ಮಾಡಿದ್ದರು ಎನ್ನಲಾಗಿದೆ.

ಜೊತೆಗೆ ಹಿರಿಯ ನಟಿಯರಾದ ಶೃತಿ, ಮಾಳವಿಕಾ ಅವಿನಾಶ್ ಸೇರಿ ಹಲವು ಹಿರಿಯ ನಟಿಯರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದ್ದರು.

Key words: Actor, Dr. Vishnuvardhan , Karnataka Ratna Award