ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು,ಜೂನ್,13,2024 (www.justkannada.in): ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಕೋರಿ ಖ್ಯಾತ ನಟ ದುನಿಯಾ ವಿಜಯ್​  ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.

ಕ್ರೌರ್ಯದ ಆಧಾರದಲ್ಲಿ ಅವರು ವಿಚ್ಛೇದನ  ಕೋರಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಆದರೆ ಪತ್ನಿ ನಾಗರತ್ನ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಅವರ ಅರ್ಜಿಯನ್ನು ವಜಾಗೊಳಿಸಿ ಫ್ಯಾಮಿಲಿ ಕೋರ್ಟ್ ಆದೇಶ ಹೊರಡಿಸಿದೆ.

ನಾಗರತ್ನ ಮತ್ತು ದುನಿಯಾ ವಿಜಯ್  ನಡುವೆ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯವಿದೆ. ಈ ನಡುವೆ ದುನಿಯಾ ವಿಜಯ್ ಅವರು 2018ರಲ್ಲಿ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದರು.

ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅವರು ಸಿದ್ಧರಿದ್ದಾರೆ. ಅಲ್ಲದೇ, ಪತ್ನಿಗೆ ಜೀವನಾಂಶ ನೀಡಲು ಕೂಡ ಅವರು ಒಪ್ಪಿದ್ದಾರೆ. ಆದರೆ, ಪ್ರತಿ ಬಾರಿ ಕೋರ್ಟ್​ನಲ್ಲಿ ವಿಚಾರಣೆ ನಡೆದಾಗ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಪ್ರಕರಣ ಈತನಕ ಮುಂದೂಡಿಕೊಂಡು ಬಂದಿತ್ತು.

Key words: Actor, Duniya Vijay ,divorce, petition, dismissed