ನಟ ಮಹೇಶ್ ಬಾಬು ತಾಯಿ ನಿಧನ

ಬೆಂಗಳೂರು, ಸೆಪ್ಟೆಂಬರ್ 28, 2022 (www.justkannada.in): ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿ ಇಂದು ನಿಧನರಾಗಿದ್ದಾರೆ.

ಇಂದಿರಾ ದೇವಿಯವರು ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಅವರನ್ನು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಮತ್ತು ತೆಲುಗು ನಟ ಮಹೇಶ್ ಬಾಬು ಅವರ ತಾಯಿ ಘಟ್ಟಮನೇನಿ ಇಂದಿರಾ ದೇವಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಇಂದು ಅವಕಾಶ ಮಾಡಿಕೊಡಲಾಗಿದೆ.

ಅಭಿಮಾನಿಗಳ ದರ್ಶನಕ್ಕಾಗಿ ಪದ್ಮಾಲಯ ಸ್ಟುಡಿಯೋದಲ್ಲಿ ಇಂದಿರಾ ಅವರ ಪಾರ್ಥೀವ ಶರೀರವನ್ನು ಇರಿಸಲಾಗುವುದು ಎಂದು ಮಹೇಶ್ ಬಾಬು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.