ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ.

ಬೆಂಗಳೂರು,ಅಕ್ಟೋಬರ್,29,2021(www.justkannada.in):  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆ  ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪುನೀತ್ ರಾಜಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ನಾಳೆ ರಾಜ್ಯದ ಖಾಸಗಿ ಶಾಲೆಗಳಿಗೆ  ರುಪ್ಸಾ ಕರ್ನಾಟಕದಿಂದ ರಜೆ ಘೋಷಣೆ ಮಾಡಲಾಗಿದೆ.

ಸರ್ಕಾರಿ ಶಾಲೆಗಳಿಗೆ ರಜೆ ನೀಡುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, ಈ ಕುರಿತು ಇನ್ನು ಯಾವುದೇ ಚರ್ಚೆಯಾಗಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಚರ್ಚಿಸಿ, ಶೀಘ್ರವೇ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

Key words: actor-punith raj kumar-death- Declaration – leave.- private schools