Sunday, September 20, 2026

BDA Apartments

Home Front Page ನ.1ರಂದು ನಟ ದಿ.ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ- ಸಿಎಂ ಬಸವರಾಜ...

ನ.1ರಂದು ನಟ ದಿ.ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ- ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ.

ಬೆಂಗಳೂರು,ಅಕ್ಟೋಬರ್,20,2022(www.justkannada.in): ನವೆಂಬರ್ 1 ರಂದು ನಟ ದಿ. ಪುನೀತ್ ರಾಜ್ ​ಕುಮಾರ್ ​ಗೆ ಕರ್ನಾಟಕ ರತ್ನ ಪ್ರಶಸ್ತಿ  ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತೇವೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ನಟ ಪುನೀತ್ ಅವರು ಉಳಿಯಬೇಕು. ಅವರು ನಿಜವಾಗಿಯೂ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ ಎಂದರು.ನ.1ರಂದು ನಟ ದಿ.ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ cm bomma...

ಕಾರ್ಯಕ್ರಮದಲ್ಲಿ  ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಭಾಗಿಯಾಗಲಿದ್ದಾರೆ.  ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Actor -Punith Rajkumar- award-  Karnataka Ratna – November 1.