ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿಗೆ ಒತ್ತಾಯ ಹಿನ್ನೆಲೆ: ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ.

ಬೆಂಗಳೂರು,ನವೆಂಬರ್,6,2021(www.justkannada.in): ಇತ್ತೀಚೆಗೆ ನಿಧನರಾದ ಟ ಪುನೀತ್‌ ರಾಜ್ ಕುಮಾರ್ ಗೆ ಮರಣೋತ್ತರ  ಪದ್ಮ ಶ್ರೀ ಪ್ರಶಸ್ತಿ ನೀಡುವಂತೆ ಅಭಿಮಾನಿಗಳಿಂದ ಒತ್ತಾಯ ಕೇಳಿಬಂದಿರುವ ಹಿನ್ನೆಲೆ ರಾಜ್ಯ ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ. ಸದ್ಯದಲ್ಲೇ ಕೇಂದ್ರಕ್ಕೆ ನಟ ಪುನೀತ್ ಹೆಸರಿನ ಶಿಫಾರಸು ಪತ್ರ ಕಳಿಸಲು ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಅಭಿಮಾನಿಗಳು ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗೆ ಸಿಎಂ ಕೂಡ ಪುನೀತ್​ಗೆ ಪದ್ಮಶ್ರೀ ನೀಡುವ ವಿಚಾರಕ್ಕೆ ಸಮ್ಮತವಿದೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದರು.

Key words: Actor -Punith Rajkumar- wants- Padma Shri- award-government – necessary- action.