Saturday, August 1, 2026

BDA Apartments

Home Cinema ‘ಪುಟ್ಟಗೌರಿ ಮದುವೆ’ ಖ್ಯಾತಿಯ ನಟ ರಕ್ಷ್’ಗೆ ಕಂಕಣ ಭಾಗ್ಯ !

‘ಪುಟ್ಟಗೌರಿ ಮದುವೆ’ ಖ್ಯಾತಿಯ ನಟ ರಕ್ಷ್’ಗೆ ಕಂಕಣ ಭಾಗ್ಯ !

ಬೆಂಗಳೂರು, ಮೇ 25, 2019 (www.justkannada.in): ‘ಪುಟ್ಟಗೌರಿ ಮದುವೆ’ ಧಾರಾವಾಹಿಯ ಖ್ಯಾತಿಯ ಕಿರುತೆರೆ ನಟ ರಕ್ಷ್ ಶೀಘ್ರದಲ್ಲಿಯೇ ಹಸೆಮಣೆ ಏರಲಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಧಾರಾವಾಹಿಯಲ್ಲಿ ರಕ್ಷ್ ಅವರು ಮಹೇಶ್ ಪಾತ್ರ ಮಾಡಿದ್ದು, ಪ್ರೇಕ್ಷಕರ ಮನ ಗೆದ್ದಿದ್ದರು.

ಅವರು 26ರಂದು ಅನುಷಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ನಟ ರಕ್ಷ್ ಇನ್‍ಸ್ಟಾಗ್ರಾಮ್ ನಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಪೋಸ್ಟ್ ಮಾಡಿದ್ದಾರೆ.