ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾ.

ಮುಂಬೈ,ಅಕ್ಟೋಬರ್,20,2021(www.justkannada.in):  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್  ಜಾಮೀನು ಅರ್ಜಿಯನ್ನ ವಜಾಗೊಳಿಸಿ ಮುಂಬೈನ ಎನ್ ಡಿ ಪಿಎಸ್ ಆದೇಶಿಸಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಅಕ್ಟೋಬರ್ 8ರಿಂದಲೂ ಜೈಲುವಾಸ ಅನುಭವಿಸುತಿದ್ದು, ಇದೀಗ ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯನ್ನು ಮುಂಬೈನ ಎನ್ ಡಿ ಪಿಎಸ್ ವಜಾಗೊಳಿಸಿ ತೀರ್ಪು ನೀಡಿದೆ. ಈ ಮೂಲಕ ಆರ್ಯನ್ ಖಾನ್ ಗೆ ಜೈಲೇ ಗತಿ ಎನ್ನುವಂತಾಗಿದೆ.

ಮೊದಲು ಮುಂಬೈನ ಕಿಲ್ಲಾ  ಕೋರ್ಟ್ ಗೆ ಆರ್ಯನ್ ಖಾನ್ ಪರ ವಕೀಲರು ಜಾಮೀನು ಅರ್ಜಿಯನ್ನ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ಅರ್ಜಿಯನ್ನ ವಜಾಗೊಳಿಸಿತ್ತು. ಹೀಗಾಗಿ ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಜಾಮೀನು ಅರ್ಜಿಯ ಕುರಿತು ವಿಚಾರಣೆ ನಡೆಸಿದ ಎನ್ ಡಿ ಪಿ ಎಸ್ ಕೋರ್ಟ್, ಇಂದಿಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಆರ್ಯನ್ ಖಾನ್, ಅರ್ಬಜ್ ಮರ್ಚೆಂಟ್ ಹಾಗೂ ಮನ್ಮುಡು ದಮಚ್ಚಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Key words actor- Shah Rukh Khan-son – Aryan Khan- bail-application- dismissed