Tuesday, September 29, 2026

BDA Apartments

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Cinema ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಸಿಎಂ ಸಿದ್ದರಾಮಯ್ಯ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ 27,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ nypunya1

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,  ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ  ತಿಳಿಸಿದ್ದಾರೆ ಎಂದು  ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ತಿಳಿಸಿದರು.justkannada cm

ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ಭೈರತಿ ಸುರೇಶ್, ಕಾನೂನು ಸಲಹೆಗಾರ ಹಾಗೂ ಶಾಸಕ ಪೊನ್ನಣ್ಣ, ಡಾ.ರವಿಕುಮಾರ್ ಉಪಸ್ಥಿತರಿದ್ದರು.

Key words: CM Siddaramaiah,  actor, Shivarajkumar,  health