ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಟ ಶಿವಣ್ಣ ಅವರ ಪ್ರತಿಕ್ರಿಯೆ ಹೀಗಿತ್ತು..?

ಬೆಂಗಳೂರು,ಏಪ್ರಿಲ್,28,2023(www.justkannada.in):  ಮಾಜಿ ಸಿಎಂ ದಿ. ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಈ ಕುರಿತು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಟ ಶಿವಣ್ಣ, ಗೀತಾ ಕಾಂಗ್ರೆಸ್ ಸೇರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಹೊಸ ಬದಲಾವಣೆ ಬಯಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.  ಗೀತಾ ತೆಗೆದುಕೊಂಡಿರುವ ನಿರ್ಧಾರಕ್ಕೆ ನನ್ನ ಬೆಂಬಲ ಸದಾ ಇರುತ್ತದೆ.  ನಾಳೆಯಿಂದ ಗೀತಾ ನಾನು ಪ್ರಚಾರದಲ್ಲಿ ಭಾಗಯಾಗುತ್ತೇವೆ.  ಮಧು ಬಂಗಾರಪ್ಪ ಪರ ಗೀತಾ ಪ್ರಚಾರ ನಡೆಸುತ್ತಾರೆ. ನಾಳೆ ಶಿರಸಿಯಲ್ಲೂ ಭೀಮಣ್ಣ ನಾಯ್ಕ್ ಪರ  ಗೀತಾ ಪ್ರಚಾರ ನಡೆಸಲಿದ್ದಾರೆ ಎಂದರು.

ಇಂದು ಗೀತಾ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಹಿಂದೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರು.

Key words: Actor- Shivarajkumar- reaction -Geetha Shivrajkumar-joining -Congress