Thursday, August 13, 2026

BDA Apartments

Home Cinema ಮೈಸೂರಿನ ಶಕ್ತಿಧಾಮಕ್ಕೆ ನಟ ಶಿವರಾಜ್‌ ಕುಮಾರ್ ದಂಪತಿ ಭೇಟಿ.

ಮೈಸೂರಿನ ಶಕ್ತಿಧಾಮಕ್ಕೆ ನಟ ಶಿವರಾಜ್‌ ಕುಮಾರ್ ದಂಪತಿ ಭೇಟಿ.

ಮೈಸೂರು,ನವೆಂಬರ್,26,2021(www.justkannada.in):   ನಟ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಮೊದಲ ಬಾರಿಗೆ ಮೈಸೂರಿನ ಶಕ್ತಿಧಾಮಕ್ಕೆ ನಟ ಶಿವರಾಜ್‌ ಕುಮಾರ್ ದಂಪತಿ ಭೇಟಿ ನೀಡಿ ಅಲ್ಲಿನ ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಪತ್ನಿ ಗೀತಾ ಅವರ ಜೊತೆ ನಟ ಶಿವರಾಜ್‌ ಕುಮಾರ್‌. ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ . ಈ ವೇಳೆ ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‌ ಕುಮಾರ್ ನೇತೃತ್ವದಲ್ಲಿ ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ನಡೆಯಿತು. ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ,  ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದರು.

150 ಮಕ್ಕಳ ಹಾರೈಕೆ, ಶಿಕ್ಷಣ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು. ಶಕ್ತಿಧಾಮಕ್ಕೆ ನಟ ಪುನೀತ್ ರಾಜ್ ಕುಮಾರ್ ದೊಡ್ಡ ಮಟ್ಟದಲ್ಲಿ ಸಾಥ್ ನೀಡಿದ್ದರು. ಇದೀಗ ಅಪ್ಪು ನಿಧನದ ಬಳಿಕ ಮೊದಲ ಬಾರಿಗೆ ನಟ ಶಿವರಾಜ್ ಕುಮಾರ್ ಶಕ್ತಿಧಾಮಕ್ಕೆ  ಭೇಟಿ ನೀಡಿ ಮಕ್ಕಳೊಂದಿಗೂ ಚರ್ಚೆ ನಡೆಸಿದ್ದಾರೆ.

Key words: Actor- Shivraj Kumar- visits –Mysore-shaktidama