ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟ ಸುನಿಲ್ ಪುರಾಣಿಕ್ ನೇಮಕ

ಬೆಂಗಳೂರು, ಜನವರಿ 02, 2019 (www.justkannada.in): ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರಾಗಿ ನಟ ಸುನಿಲ್ ಪುರಾಣಿಕ್ ನೇಮಕವಾಗಿದ್ದಾರೆ.

ಸುನಿಲ್ ಪುರಾಣಿಕ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೊಸ ವರ್ಷದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರದಿಂದ ಅಧಿಸೂಚನೆ ಪ್ರಕಟಗೊಂಡಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ನಟ ಸುನಿಲ್ ಪುರಾಣಿಕ್ ರನ್ನ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ನೇಮಿಸಿದೆ. ಮುಂದಿನ ಆದೇಶದವರೆಗೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಮುಂದುವರೆಯಲಿದ್ದಾರೆ ಎಂದು ಅಧಿಸೂಚನೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಉಲ್ಲೇಖಿಸಿದ್ದಾರೆ.