ನಟ ವಿಶಾಲ್, ತಂದೆ ಜಿ.ಕೆ. ರೆಡ್ಡಿ ಅವರಿಗೆ ಕೊರೊನಾ ಸೋಂಕು ದೃಢ

ಹೈದರಾಬಾದ್, ಜುಲೈ 26, 2020 (www.justkannada.in): ನಟ ವಿಶಾಲ್ ಮತ್ತು ಅವರ ತಂದೆ ಜಿ.ಕೆ. ರೆಡ್ಡಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ನಟ ವಿಶಾಲ್ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ತಂದೆಯವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಅಂದಹಾಗೆ ಈಗಾಗಲೇ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳತೊಡಗಿದ್ದಾರೆ.

ವಿಶಾಲ್ ಅವರ ವ್ಯವಸ್ಥಾಪಕರಿಗೆ ಕೂಡ ಆರೋಗ್ಯ ಸಮಸ್ಯೆ ಎದುರಾಗಿದೆ. ಈ ಹಿಂದೆ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಮತ್ತು ಅವರ ಪುತ್ರಿ ಆರಾಧ್ಯಾ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಸ್ಯಾಂಡಲ್ವುಡ್ ಸ್ಟಾರ್ ಧ್ರುವ ಸರ್ಜಾ ದಂಪತಿಗೂ ಕೊರೊನಾ ಪಾಸಿಟಿವ್ ವರದಿ ಬಂದಿತ್ತು.