ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ

ಬೆಂಗಳೂರು:ಮೇ-2:(www.justkannada.in) ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ತಾರಾ ಜೋಡಿ ಹಿತಾ ಚಂದ್ರ ಶೇಖರ್ ಹಾಗೂ ಹಾಗೇ ಸುಮ್ಮನೆ ಖ್ಯಾತಿಯ ಕಿರಣ್ ಶ್ರೀನಿವಾಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಹಿರಿಯ ನಟ ಸಿಹಿಕಹಿ ಚಂದ್ರು-ಗೀತಾ ಪುತ್ರಿ ಹಿತಾ ಹಾಗೂ ನಟ ಕಿರಣ್ ಶ್ರೀನಿವಾಸ್ ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಎರಡು ಕುಟುಂಬದವರು ಮತ್ತು ಸಂಬಂಧಿಕರು, ಸ್ನೇಹಿತಯರು ಭಾಗವಹಿಸಿದ್ದು, ನವಜೋಡಿಗೆ ಶುಭಕೋರಿದ್ದಾರೆ.

ಈ ಹಿಂದೆಯೇ ಹಿತಾ ತಾವೂ ಕಿರಣ್ ಅವರನ್ನು ಪ್ರೀತಿಸುತ್ತಿದ್ದ ಬಗ್ಗೆ ಮತ್ತು ಇನ್ನೂ ಎರಡು ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು.

ಕಿರಣ್ 2008ರಲ್ಲಿ `ಹಾಗೇ ಸುಮ್ಮನೆ’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್ ಪ್ರವೇಶಿಸಿದ್ದು, `ಚಿರು’, `ಮುಗಿಲ ಮಲ್ಲಿಗೆಯೋ’, `ಕಾಂಚನಾ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಿರಣ್ ಸಿನಿಮಾ ಮಾತ್ರವಲ್ಲದೇ ರಿಯಾಲಿಟಿ ಶೋ ಹಾಗೂ ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ. ಹಿತಾ ಚಂದ್ರಶೇಖರ್ 2016ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಡಾನ್ಸಿಂಗ್ ಸ್ಟಾರ್’ ಸೀಸನ್ 3ರಲ್ಲಿ ವಿಜೇತೆಯಾಗಿದ್ದರು. ನಂತರ `ಕಾಲ್ ಕೆಜಿ ಪ್ರೀತಿ’ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದರು. ಇದೀಗ ‘ಪ್ರೀಮಿಯರ್ ಪದ್ಮಿನಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ
actors kiran srinivas and hitha chandrashekar got engaged