ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ.

ಬೆಂಗಳೂರು,ಜುಲೈ,26,2021(www.justkannada.in): ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.jk

ಜಯಂತಿ ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಇಂದು  ನಿಧನರಾಗಿದ್ದಾರೆ. ಕನ್ನಡದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿ ಅವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ  ಅಭಿನಯಿಸಿದ್ದಾರೆ.

ಜಯಂತಿ ಅವರು 1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದರು. ಅವರ ಮೂಲ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಬಂದ ನಂತರ ಜಯಂತಿಯಾದರು. ಜಯಂತಿ ಅವರು ವೈ ಆರ್ ಪುಟ್ಟಸ್ವಾಮಿ ಅವರ ‘ಜೇನುಗೂಡು’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ನಟಿ ಜಯಂತಿ ಅವರ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ENGLISH SUMMARY…

Sandalwood’s veteran actress Jayanthi no more: Former CM Siddaramaiah condoles
Bengaluru, July 26, 2021 (www.justkannada.in): Sandalwood’s veteran actress Jayanthi expired today at her residence in Bengaluru.
She was 76-years-old. She was ailing for some time. Jayanthi has acted in more than 150 Kannada films. She had acted in over 500 films including several languages like Telugu, Tamil, Malayalam, Hindi, and Marathi. She also has the credit of acting with Kannada filmdom’s doyen Dr. Rajkumar in 45 movies.
Jayanthi was born in 1950 in Ballari. Her birth name is Kamala Kumari and was named Jayanthi on the silver screen. She entered the world of feature films through the Kannada movie ‘Jenugoodu’.
Former Chief Minister and leader of the opposition Siddaramaiah has expressed his grief over the death of the veteran actress.
Keywords: Veteran actress Jayanthi/ Kannada films/ Sandalwood/ Former CM Siddaramaiah/ condoles

Key words: actress- Jayanthi – passed away- Former CM –Siddaramaiah- Condolences.