ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ನಟಿ ಪಾಯಲ್

ಬೆಂಗಳೂರು, ಸೆಪ್ಟೆಂಬರ್ 23, 2020 (www.justkannada.in): ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಮುಂಬೈನ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅನುರಾಗ್ ಕಶ್ಯಪ್ ಅತ್ಯಾಚಾರವೆಸಗಿರುವುದಾಗಿ ಬಾಲಿವುಡ್ ನಟಿ ಪಾಯಲ್ ಘೋಷ್ ಆರೋಪಿಸಿದ್ದಾರೆ. ಅನುರಾಗ್ ವಿರುದ್ಧ ಐಪಿಸಿ ಸೆಕ್ಷನ್ 376, 354, 341, 342ರ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಪಾಯಲ್ ಪರ ವಕೀಲ ನಿತಿನ್ ಸತ್ಪೂಟ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಟಿ ಪಾಯಲ್ ಸೋಮವಾರ ಓಶಿವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಲ್ಲಿ ಮಹಿಳಾ ಕಾನ್ ಸ್ಟೆಬಲ್ ಇಲ್ಲದ ಕಾರಣ ದೂರು ನೀಡಿರಲಿಲ್ಲ.