ಸ್ಲಂ ನಿವಾಸಿಗಳಿಗೆ ಆರೋಗ್ಯ ತಪಾಸಣೆ: ಸೇವಾ ಕಾರ್ಯದ ಮೂಲಕ ಹುಟ್ಟುಹಬ್ಬ ಆಚರಿಸಿದ ನಟಿ ಪ್ರಣೀತಾ

ಬೆಂಗಳೂರು, ಅಕ್ಟೋಬರ್ 19, 2019 (www.justkannada.in): ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸುವ ಮೂಲಕ ನಟಿ ಪ್ರಣಿತಾ ಸುಭಾಷ್ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಸಮಾಜಮುಖಿ ಕಾರ್ಯಕ್ರಮಗಳಿಗಾಗಿಯೇ ಪ್ರಣೀತಾ, ‘ಪ್ರಣಿತಾ ಫೌಂಡೇಶನ್ ಸಂಸ್ಥೆ’ ಆರಂಭಿಸಿದ್ದಾರೆ. ಈ ಸಂಸ್ಥೆಯಿಂದ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯವನ್ನು ಕೈಗೊಂಡಿದ್ದಾರೆ.